Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:17 - ಕನ್ನಡ ಸತ್ಯವೇದವು C.L. Bible (BSI)

17 “ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:17
23 ತಿಳಿವುಗಳ ಹೋಲಿಕೆ  

“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಆಗ ನಾನು ಯೆಹೂದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು