Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:18 - ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:18
30 ತಿಳಿವುಗಳ ಹೋಲಿಕೆ  

“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.


ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು