Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:19 - ಕನ್ನಡ ಸತ್ಯವೇದವು C.L. Bible (BSI)

19 “ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:19
18 ತಿಳಿವುಗಳ ಹೋಲಿಕೆ  

ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.


ಅವರಿಗೆ 736 ಕುದುರೆಗಳೂ 245 ಹೇಸರಕತ್ತೆಗಳೂ 435 ಒಂಟೆಗಳೂ


ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು; ನನ್ನ ವಿಧಿಗಳನ್ನೇ ಅನುಸರಿಸಬೇಕು.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.


“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


“ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ನಾಡಿನಲ್ಲಿ ನಿರ್ಭಯವಾಗಿ ಬಾಳುವಿರಿ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು