Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:22 - ಕನ್ನಡ ಸತ್ಯವೇದವು C.L. Bible (BSI)

22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಜಕನು ಅವನನ್ನು ಶುದ್ಧಿಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಆ ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಆ ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:22
7 ತಿಳಿವುಗಳ ಹೋಲಿಕೆ  

ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಆ ವ್ಯಕ್ತಿ ಪ್ರಾಯಶ್ಚಿತ್ತ ಬಲಿಗಾಗಿ ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.


“ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು