Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:34 - ಕನ್ನಡ ಸತ್ಯವೇದವು C.L. Bible (BSI)

34 ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:34
12 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


ಆದ್ದರಿಂದ ನೀನು ನಮಗೆ ಕಣ್ಣಾಗಿರಬೇಕು. ನೀನು ನಮ್ಮ ಸಂಗಡ ಬಂದರೆ ಸರ್ವೇಶ್ವರ ನಮಗೆ ಮಾಡುವ ಒಳಿತೆಲ್ಲವನ್ನು ನಿನ್ನೊಂದಿಗೆ ಹಂಚಿಕೊಳ್ಳುತ್ತೇವೆ,” ಎಂದು ಉತ್ತರಕೊಟ್ಟನು.


“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು