Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:36 - ಕನ್ನಡ ಸತ್ಯವೇದವು C.L. Bible (BSI)

36 ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ತಕ್ಕಡಿ, ತೂಕದ ಕಲ್ಲು, ಕೊಳಗ, ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:36
11 ತಿಳಿವುಗಳ ಹೋಲಿಕೆ  

ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;


ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.


ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ?


“ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು