Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:5 - ಕನ್ನಡ ಸತ್ಯವೇದವು C.L. Bible (BSI)

5 “ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನೀವು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ, ನೀವು ಅಂಗೀಕೃತರಾಗುವಂತೆ ಅವುಗಳನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:5
16 ತಿಳಿವುಗಳ ಹೋಲಿಕೆ  

“ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.


“ಯಾರಾದರು ಹರಕೆಯನ್ನು ಸಲ್ಲಿಸುವುದಕ್ಕಾಗಿ ಅಥವಾ ಸ್ವೇಚ್ಛೆಯಿಂದ ಅಂಥ ಬಲಿಯನ್ನು ಒಪ್ಪಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಪೂರ್ತಿಯಾಗಿ ಊಟ ಮಾಡಬೇಕಾಗಿಲ್ಲ; ಮಿಕ್ಕದ್ದನ್ನು ಮರುದಿನ ತಿನ್ನಬಹುದು.


ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.


ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.


ನೀವು ಮಾಡುವ ಬಲಿದಾನದ ಮಾಂಸವನ್ನು ಅದೇ ದಿನದಲ್ಲಿ ಅಥವಾ ಮರುದಿನದಲ್ಲಿ ಊಟಮಾಡಿಬಿಡಬೇಕು. ಮೂರನೆಯ ದಿನದವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಆ ಬಲಿಪ್ರಾಣಿಯ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದ್ದೇ ಆದರೆ ಆ ಬಲಿ ಸ್ವೀಕೃತವಾಗುವುದಿಲ್ಲ. ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರಕುವುದಿಲ್ಲ. ಅದು ಹೇಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು