Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:9 - ಕನ್ನಡ ಸತ್ಯವೇದವು C.L. Bible (BSI)

9 “ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು; ಮತ್ತು ಕೊಯ್ದಾಗ ಹಕ್ಕಲಾಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:9
9 ತಿಳಿವುಗಳ ಹೋಲಿಕೆ  

ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


ಅವಳು ಪುನಃ ಹಕ್ಕಲು ತೆನೆಗಳನ್ನು ಆರಿಸಿಕೊಳ್ಳಲು ಹೋದಾಗ, ಬೋವಜನು ತನ್ನ ಆಳುಗಳಿಗೆ, “ಸಿವುಡುಗಳ ಮಧ್ಯದಲ್ಲೂ ಅವಳು ತೆನೆಗಳನ್ನು ಆರಿಸಿಕೊಳ್ಳಲಿ; ಅಡ್ಡಿಮಾಡಬೇಡಿ.


ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.


ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.


ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು