Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:1 - ಕನ್ನಡ ಸತ್ಯವೇದವು C.L. Bible (BSI)

1 “ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:1
31 ತಿಳಿವುಗಳ ಹೋಲಿಕೆ  

ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.


ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ.


ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.


ಬೆಳಿಗ್ಗೆ ಆ ಕುರಿಯೊಂದಿಗೆ ಧಾನ್ಯ ನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನು ಮತ್ತು ಮೂರು ಸೇರು ಗೋದಿಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.


ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಪ್ರಕಾರ ಧಾನ್ಯ ಹಾಗು ಪಾನಗಳನ್ನು ಒಪ್ಪಿಸಬೇಕು.


ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.


ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”


ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.


ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು