Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:11 - ಕನ್ನಡ ಸತ್ಯವೇದವು C.L. Bible (BSI)

11 “ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:11
19 ತಿಳಿವುಗಳ ಹೋಲಿಕೆ  

ಒಂದಿಷ್ಟು ಹುಳಿ ಸಾಕು, ಹಿಟ್ಟನ್ನೆಲ್ಲಾ ಹುದುಗೆಬ್ಬಿಸಲು!


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


“ನನಗೆ ಬಲಿಯನ್ನು ಅರ್ಪಿಸುವಾಗ ಆ ಬಲಿ ಪ್ರಾಣಿಯ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪ್ರಾಣಿಯ ಕೊಬ್ಬನ್ನು ಮಾರನೆಯ ದಿನದವರೆಗೂ ಇಡಲೇಕೂಡದು.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.


ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.


ಮಗನೇ, ಜೇನು ತಿನ್ನು, ಅದು ಚೆನ್ನಾಗಿದೆ; ತೊಟ್ಟಿಕ್ಕುವ ಜೇನುತುಪ್ಪ ನಿನ್ನ ಬಾಯಿಗೆ ಸಿಹಿ ಅಲ್ಲವೇ?


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು