Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:10 - ಕನ್ನಡ ಸತ್ಯವೇದವು C.L. Bible (BSI)

10 “ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:10
12 ತಿಳಿವುಗಳ ಹೋಲಿಕೆ  

ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಗುಟ್ಟಾಗಿಯೇ ಪರಪುರುಷನೊಡನೆ ಸಂಗಮಿಸಿ, ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾಗಿರಬಹುದು.


ಮುಂದೆ, ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು.


ಏಕೆಂದರೆ ಅಂಥ ನಡತೆ ಕಾಮುಕತನವಾಗುತ್ತಿತ್ತು ನ್ಯಾಯಾಧಿಪತಿಗಳ ದಂಡನೆಗೆ ತಕ್ಕ ಅಪರಾಧವಾಗುತ್ತಿತ್ತು.


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ನನ್ನ ಹೃದಯ ಪರಸ್ತ್ರೀಗೆ ಮಾರುಹೋಗಿದ್ದರೆ ನೆರೆಯವಳ ಬಾಗಿಲ ಬಳಿ ನಾನು ಹೊಂಚುಹಾಕಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು