Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:14 - ಕನ್ನಡ ಸತ್ಯವೇದವು C.L. Bible (BSI)

14 ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:14
6 ತಿಳಿವುಗಳ ಹೋಲಿಕೆ  

“ಮದುವೆ ಮಾಡಿಕೊಂಡವಳ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗಮಿಸಬಾರದು. ಅವರು ರಕ್ತಸಂಬಂಧಿಗಳು, ಅದು ಅಧರ್ಮ.


“ಅವರು, ‘ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು