Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:16 - ಕನ್ನಡ ಸತ್ಯವೇದವು C.L. Bible (BSI)

16 ಯಾವ ಸ್ತ್ರೀಯಾದರೂ ಪ್ರಾಣಿಯಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪ್ರಾಣಿಯನ್ನು ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ. ಆ ಮರಣ ಶಿಕ್ಷೆಗೆ ತಾವೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ; ಆ ಮರಣಶಿಕ್ಷೆಗೆ ತಾವೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವಳಿಗೆ ಮತ್ತು ಅದಕ್ಕೆ ಮರಣ ಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:16
8 ತಿಳಿವುಗಳ ಹೋಲಿಕೆ  

ಏಕೆಂದರೆ, ಈ ಬೆಟ್ಟವನ್ನು ಮುಟ್ಟುವ ಯಾರೇ ಆಗಲಿ, ಯಾವ ಪ್ರಾಣಿಯೇ ಆಗಲಿ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಎಂಬ ಆಜ್ಞೆಯನ್ನು ಅವರು ಸಹಿಸಲಾರದೆಹೋದರು.


ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.


ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”


“ಎತ್ತೊಂದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ತಿವಿದು ಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಕೂಡದು. ಆ ಎತ್ತಿನ ಒಡೆಯನಾದರೋ ದೋಷಿಯಾಗಲಾರನು.


“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.


ಪ್ರಾಣಿ ಸಂಗಮವನ್ನು ಮಾಡಿ ಅಶುದ್ಧರಾಗಬಾರದು; ಯಾವ ಸ್ತ್ರೀಯೂ ಸಂಗಮಕ್ಕಾಗಿ ಪ್ರಾಣಿಯನ್ನು ಸಂಪರ್ಕಿಸಬಾರದು; ಅದು ವ್ಯತಿರಿಕ್ತವಾದುದು.


ಯಾವನಾದರೂ ಪ್ರಾಣಿಸಂಗ ಮಾಡಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಆ ಪ್ರಾಣಿಯನ್ನು ಕೊಲ್ಲಿಸಬೇಕು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು