ಯಾಜಕಕಾಂಡ 20:17 - ಕನ್ನಡ ಸತ್ಯವೇದವು C.L. Bible (BSI)17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗವಿುಸಿದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು. ಅಧ್ಯಾಯವನ್ನು ನೋಡಿ |