Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:2 - ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:2
33 ತಿಳಿವುಗಳ ಹೋಲಿಕೆ  

ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.


ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ವಿಗ್ರಹಗಳನ್ನು ಮಾಡಿ ಪೂಜಿಸಿದಿರಿ; ಮೋಲೆಕ ದೇವರ ಗುಡಾರವನ್ನೂ ನಕ್ಷತ್ರಾಧಿಪತಿಯಾದ ರೇಫಾ ದೇವತೆಯ ಪ್ರತಿಮೆಯನ್ನೂ ಹೊತ್ತುಕೊಂಡು ಹೋದಿರಿ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆ ಗಡಿಪಾರುಮಾಡುತ್ತೇನೆ,’ ಎಂದು ಬರೆದಿದೆ.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.


ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.


ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.


ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.


ಸುರಿಸಿದರು ತಮ್ಮ ಮಕ್ಕಳ ನಿರ್ದೋಷ ರಕ್ತವನು I ಬಲಿಕೊಟ್ಟರು ಕಾನಾನ್ಯರ ವಿಗ್ರಹಗಳಿಗೆ ಅವರನು I ಹೊಲೆಮಾಡಿದರಂಥ ಕೊಲೆಗಳಿಂದ ದೇಶವನು II


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


“ಇಸ್ರಯೇಲರಲ್ಲಾಗಲಿ ಅವರ ನಡುವೆ ವಾಸಮಾಡುವ ಅನ್ಯದೇಶೀಯರಲ್ಲಾಗಲಿ ಯಾರಾದರು ಬೇಟೆಮಾಡಿ ತಿನ್ನಬಹುದಾದ ಪ್ರಾಣಿಯನ್ನು ಅಥವಾ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿದು ಮಣ್ಣಿನಿಂದ ಮುಚ್ಚಿಡಬೇಕು.


“ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು