Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:20 - ಕನ್ನಡ ಸತ್ಯವೇದವು C.L. Bible (BSI)

20 ಯಾವನಾದರೂ ದೊಡ್ಡಮ್ಮನನ್ನಾಗಲಿ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವನಾದರೂ ದೊಡ್ಡ ತಾಯಿಯನ್ನಾಗಲಿ ಚಿಕ್ಕ ತಾಯಿಯನ್ನಾಗಲಿ ಸಂಗವಿುಸಿದರೆ ಅವನು ದೊಡ್ಡಪ್ಪ ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:20
8 ತಿಳಿವುಗಳ ಹೋಲಿಕೆ  

“ತಂದೆಯ ಅಣ್ಣತಮ್ಮಂದಿರ ಹೆಂಡತಿಯನ್ನು ಸಂಭೋಗಿಸಬಾರದು; ಅವರು ದೊಡ್ಡಮ್ಮ, ಚಿಕ್ಕಮ್ಮ ನಿಮಗೆ.


ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.


ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.


ಯಾವನಾದರೂ ಅತ್ತಿಗೆ ನಾದಿನಿಯವರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು. ಅವರಿಗೆ ಸಂತಾನವಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು