Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:22 - ಕನ್ನಡ ಸತ್ಯವೇದವು C.L. Bible (BSI)

22 ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:22
20 ತಿಳಿವುಗಳ ಹೋಲಿಕೆ  

ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II


ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


“ಇಸ್ರಯೇಲರಿಗೆ ಈ ಕಟ್ಟಳೆಗಳನ್ನು ಕೊಡು:


ನೀತಿಯುತ ನಿನ್ನ ವಿಧಿಗಳ ನಿಮಿತ್ತ I ಸ್ತುತಿಪೆ ನಿನ್ನ ದಿನಕ್ಕೆ ಏಳುಕಿತ್ತಾ II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು