Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮ ದೇವರಾದ ಯೆಹೋವನಾಗಿರುವದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:7
15 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು