Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧ ಜನವಾಗುವಂತೆ ಮಾಡುವ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:8
19 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.


ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,


“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು