Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:9 - ಕನ್ನಡ ಸತ್ಯವೇದವು C.L. Bible (BSI)

9 “ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸಿದದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:9
17 ತಿಳಿವುಗಳ ಹೋಲಿಕೆ  

“ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.”


‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಗಾಗಲೀ, ತಾಯಿಗಾಗಲೀ, ಶಾಪಹಾಕುವವನಿಗೆ ಮರಣದಂಡನೆ ಆಗಲೇಬೇಕು’ ಎಂದು ದೇವರ ಕಟ್ಟಳೆ ಇದೆ.


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಯಾವ ಸ್ತ್ರೀಯಾದರೂ ಪ್ರಾಣಿಯಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪ್ರಾಣಿಯನ್ನು ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ. ಆ ಮರಣ ಶಿಕ್ಷೆಗೆ ತಾವೇ ಕಾರಣರು.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು