Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:6 - ಕನ್ನಡ ಸತ್ಯವೇದವು C.L. Bible (BSI)

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:6
20 ತಿಳಿವುಗಳ ಹೋಲಿಕೆ  

ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


ನನ್ನ ಸನ್ನಿಧಿಗೆ ಬರುವ ಯಾಜಕರು ಕೂಡ ತಮ್ಮನ್ನೇ ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದು ಹೇಳಿದರು.


ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.


ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.


ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು