Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:7 - ಕನ್ನಡ ಸತ್ಯವೇದವು C.L. Bible (BSI)

7 ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಜಕರು ತಮ್ಮ ದೇವರಿಗೆ ಮೀಸಲಾದವರಾಗಿರುವದರಿಂದ ವೇಶ್ಯಾ ಸ್ತ್ರೀಯನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:7
7 ತಿಳಿವುಗಳ ಹೋಲಿಕೆ  

ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು