Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:8 - ಕನ್ನಡ ಸತ್ಯವೇದವು C.L. Bible (BSI)

8 ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:8
18 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಅಂತೆಯೇ ಮೋಶೆ ಬೆಟ್ಟದಿಂದ ಇಳಿದು ಬಂದು ಜನರನ್ನು ಪರಿಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.


“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು