Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:13 - ಕನ್ನಡ ಸತ್ಯವೇದವು C.L. Bible (BSI)

13 ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾಜಕನ ಮಗಳು ವಿಧವೆಯಾಗಿಯಾಗಲಿ ಗಂಡನಿಂದ ಬಿಡಲ್ಪಟ್ಟವಳಾಗಿಯಾಗಲಿ ಮಕ್ಕಳಿಲ್ಲದ ಪಕ್ಷಕ್ಕೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ತಿರಿಗಿ ತಂದೆಯ ಮನೆ ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಉಣ್ಣಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:13
11 ತಿಳಿವುಗಳ ಹೋಲಿಕೆ  

ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು.


“ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.


ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.


ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.


ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು