Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:19 - ಕನ್ನಡ ಸತ್ಯವೇದವು C.L. Bible (BSI)

19 ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19-20 ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:19
21 ತಿಳಿವುಗಳ ಹೋಲಿಕೆ  

“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


“ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ;


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಅವನು ಕುರುಡನಾಗಲಿ, ಕುಂಟನಾಗಲಿ, ಕೊರೆಮೂಗನಾಗಲಿ,


“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;


“ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು