Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:23 - ಕನ್ನಡ ಸತ್ಯವೇದವು C.L. Bible (BSI)

23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:23
7 ತಿಳಿವುಗಳ ಹೋಲಿಕೆ  

ಅವನು ಕುರುಡನಾಗಲಿ, ಕುಂಟನಾಗಲಿ, ಕೊರೆಮೂಗನಾಗಲಿ,


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.


ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು.


“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;


“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು