Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:3 - ಕನ್ನಡ ಸತ್ಯವೇದವು C.L. Bible (BSI)

3 ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:3
10 ತಿಳಿವುಗಳ ಹೋಲಿಕೆ  

ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.


“ಆರೋನನು ಮತ್ತು ಅವನ ಮಕ್ಕಳು ತಾವು ಅಶುದ್ಧರಾಗಿರುವಾಗ ಇಸ್ರಯೇಲರಿಂದ ನನಗೆ ಸಮರ್ಪಿತವಾದ ಪರಿಶುದ್ಧ ಪದಾರ್ಥಗಳನ್ನು ಮುಟ್ಟಬಾರದೆಂದು ಆಜ್ಞಾಪಿಸು. ಅವರು ನನ್ನ ಪವಿತ್ರನಾಮದ ಘನತೆಗೆ ಕುಂದುತರಬಾರದು. ನಾನು ಸರ್ವೇಶ್ವರ.


ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು