Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:8 - ಕನ್ನಡ ಸತ್ಯವೇದವು C.L. Bible (BSI)

8 ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಅವನ ಜೀವನವಷ್ಟೆ. ತಾನಾಗಿ ಸತ್ತುಬಿದ್ದದ್ದನ್ನಾಗಲಿ ಕಾಡುಮೃಗದಿಂದ ಕೊಲ್ಲಲ್ಪಟ್ಟದ್ದನ್ನಾಗಲಿ ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:8
8 ತಿಳಿವುಗಳ ಹೋಲಿಕೆ  

“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು