Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:14 - ಕನ್ನಡ ಸತ್ಯವೇದವು C.L. Bible (BSI)

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:14
15 ತಿಳಿವುಗಳ ಹೋಲಿಕೆ  

“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


“ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.


ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು