Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:17 - ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮ್ಮ ನಿವಾಸಗಳಿಂದ [ತಂದ ಹಿಟ್ಟಿನಲ್ಲಿ] ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:17
22 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.


ಅದೂ ಅಲ್ಲದೆ ಹುಳಿರೊಟ್ಟಿಗಳನ್ನು ಕೂಡ ಸಮರ್ಪಿಸಬೇಕು.


“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


“ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.


“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”


ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.


“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.


ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.


ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


“ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ.


ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು