ಯಾಜಕಕಾಂಡ 23:2 - ಕನ್ನಡ ಸತ್ಯವೇದವು C.L. Bible (BSI)2 “ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿ |