Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:21 - ಕನ್ನಡ ಸತ್ಯವೇದವು C.L. Bible (BSI)

21 ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:21
14 ತಿಳಿವುಗಳ ಹೋಲಿಕೆ  

“ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:


ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.


ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.


ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು