Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:24 - ಕನ್ನಡ ಸತ್ಯವೇದವು C.L. Bible (BSI)

24 ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:24
14 ತಿಳಿವುಗಳ ಹೋಲಿಕೆ  

ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.


ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ಸರ್ವೇಶ್ವರ ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಹೇಳಿದರು:


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು