ಯಾಜಕಕಾಂಡ 23:3 - ಕನ್ನಡ ಸತ್ಯವೇದವು C.L. Bible (BSI)3 ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು. ಅಧ್ಯಾಯವನ್ನು ನೋಡಿ |