ಯಾಜಕಕಾಂಡ 23:32 - ಕನ್ನಡ ಸತ್ಯವೇದವು C.L. Bible (BSI)32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ. ಅಧ್ಯಾಯವನ್ನು ನೋಡಿ |