Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:36 - ಕನ್ನಡ ಸತ್ಯವೇದವು C.L. Bible (BSI)

36 ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:36
8 ತಿಳಿವುಗಳ ಹೋಲಿಕೆ  

ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.


ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು