ಯಾಜಕಕಾಂಡ 23:4 - ಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿ |
ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.