Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:42 - ಕನ್ನಡ ಸತ್ಯವೇದವು C.L. Bible (BSI)

42 ಆ ಏಳು ದಿನಗಳು ನೀವು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಸ್ವದೇಶೀಯರಾದ ಇಸ್ರಯೇಲರೆಲ್ಲರು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು; ಸ್ವದೇಶಸ್ಥರಾದ ಇಸ್ರಾಯೇಲ್ಯರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನೀವು ಏಳು ದಿನಗಳವರೆಗೆ ಪರ್ಣಶಾಲೆಗಳಲ್ಲಿ ವಾಸಿಸಬೇಕು. ಇಸ್ರೇಲರಲ್ಲಿ ಹುಟ್ಟಿದವರೆಲ್ಲರೂ ಆ ಪರ್ಣಶಾಲೆಗಳಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:42
11 ತಿಳಿವುಗಳ ಹೋಲಿಕೆ  

ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪೂರ್ವಜ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಶಿರಸಾವಹಿಸಿ ನಡೆಸಿಕೊಂಡು ಬರುತ್ತಿದ್ದೇವೆ.


ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.


ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.


ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.


“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು