Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:11 - ಕನ್ನಡ ಸತ್ಯವೇದವು C.L. Bible (BSI)

11 ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:11
33 ತಿಳಿವುಗಳ ಹೋಲಿಕೆ  

ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.


ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.


ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ಇಸ್ರಯೇಲ್ ಮಹಿಳೆಯೊಬ್ಬಳಿಗೆ ಈಜಿಪ್ಟಿನ ಪುರುಷನಿಂದ ಹುಟ್ಟಿದ ಒಬ್ಬ ವ್ಯಕ್ತಿ ಇದ್ದನು. ಇವನು ಇಸ್ರಯೇಲರ ಪಾಳೆಯಕ್ಕೆ ಬಂದು ಇಸ್ರಯೇಲನೊಬ್ಬನ ಸಂಗಡ ಜಗಳವಾಡಿ, ಬೈದುದು ಮಾತ್ರವಲ್ಲದೆ ಸರ್ವೇಶ್ವರ ಸ್ವಾಮಿಯನ್ನು ದೂಷಿಸಿ ಶಾಪ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು