ಯಾಜಕಕಾಂಡ 24:5 - ಕನ್ನಡ ಸತ್ಯವೇದವು C.L. Bible (BSI)5 “ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.