Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:18 - ಕನ್ನಡ ಸತ್ಯವೇದವು C.L. Bible (BSI)

18 “ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ನಾಡಿನಲ್ಲಿ ನಿರ್ಭಯವಾಗಿ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅವುಗಳಿಗೆ ವಿಧೇಯರಾಗಿರಿ. ಆಗ ನೀವು ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:18
20 ತಿಳಿವುಗಳ ಹೋಲಿಕೆ  

ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು