Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:22 - ಕನ್ನಡ ಸತ್ಯವೇದವು C.L. Bible (BSI)

22 ಎಂಟನೆಯ ವರ್ಷದಲ್ಲಿ ಬಿತ್ತನೆ ಮಾಡಿ ಅದರ ಬೆಳೆ ದೊರೆಯುವ ತನಕ, ಅಂದರೆ ಒಂಬತ್ತನೆಯ ವರ್ಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಎಂಟನೆಯ ವರುಷದಲ್ಲಿ ಬೀಜವನ್ನು ಬಿತ್ತಿ ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರುಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ ನೀವು ಹಳೆಯ ಬೆಳೆಯನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:22
6 ತಿಳಿವುಗಳ ಹೋಲಿಕೆ  

ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.


ನೀವು ಬಹು ದಿನದಿಂದ ಕೂಡಿಸಿಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ. ಹೊಸ ದವಸಧಾನ್ಯಗಳಿಗೆ ಕಣಜ ಸಾಲದೆ ಹಳೆಯದನ್ನು ತೆಗೆದುಬಿಡುವಿರಿ.


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


ಆರನೆಯ ದಿನದಲ್ಲಿ ಮಾತ್ರ ಪ್ರತಿದಿನ ಕೂಡಿಸಿದ್ದಕ್ಕಿಂತಲೂ ಎರಡರಷ್ಟು ಕೂಡಿಸಿ ಸಿದ್ಧಪಡಿಸಿಕೊಳ್ಳಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು