Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:23 - ಕನ್ನಡ ಸತ್ಯವೇದವು C.L. Bible (BSI)

23 “ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:23
22 ತಿಳಿವುಗಳ ಹೋಲಿಕೆ  

ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II


ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.


ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು