ಯಾಜಕಕಾಂಡ 25:29 - ಕನ್ನಡ ಸತ್ಯವೇದವು C.L. Bible (BSI)29 “ಯಾವನಾದರು ಕೋಟೆಯಿರುವ ಪಟ್ಟಣದ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನದಿಂದ ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು. ಒಂದು ವರ್ಷ ಪೂರ್ತಿ ಅದನ್ನು ಬಿಡಿಸುವ ಹಕ್ಕು ಅವನಿಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರುಷ ಪೂರ್ತಿಯಾಗುವದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರುಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದಲ್ಲಿರುವ ನಿವಾಸದ ಮನೆಯನ್ನು ಮಾರಿದರೆ, ಅದನ್ನು ಮಾರಿದ ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು. ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡಿಸಬಹುದು. ಅಧ್ಯಾಯವನ್ನು ನೋಡಿ |