ಯಾಜಕಕಾಂಡ 25:36 - ಕನ್ನಡ ಸತ್ಯವೇದವು C.L. Bible (BSI)36 ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನೀವು ಅವನಿಂದ ಬಡ್ಡಿಯನ್ನಾಗಲಿ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು. ಅಧ್ಯಾಯವನ್ನು ನೋಡಿ |