Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:50 - ಕನ್ನಡ ಸತ್ಯವೇದವು C.L. Bible (BSI)

50 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದೆ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರುಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿಯೂ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 “ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ: ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ. ಯಾಕೆಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಿನ ಜೂಬಿಲಿ ಸಂವತ್ಸರದವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:50
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ಇಂತಿರಲು ತಿರುಗಿಸಿಬಿಡು ಅವನಿಂದ ನಿನ್ನ ದೃಷ್ಟಿಯನು ಸವಿಯಲು ಬಿಡು ಕೂಲಿಯಾಳಂತೆ ದಿನಾಂತ್ಯದ ನಲಿವನು.


“ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಅವನು ವರುಷ ವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆ ಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.


ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ.


ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.


ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.


ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಹೆಚ್ಚು ಭಾಗವನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು