Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:54 - ಕನ್ನಡ ಸತ್ಯವೇದವು C.L. Bible (BSI)

54 ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 “ಯಾರೂ ಅವನನ್ನು ಬಿಡಿಸದಿದ್ದರೂ ಜ್ಯೂಬಿಲಿ ವರ್ಷದಲ್ಲಿ ಅವನು ಮತ್ತು ಅವನ ಮಕ್ಕಳು ಬಿಡುಗಡೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 “ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:54
8 ತಿಳಿವುಗಳ ಹೋಲಿಕೆ  

ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು.


ಏಕೆಂದರೆ ಇಸ್ರಯೇಲರು ನನ್ನ ದಾಸರೇ; ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆನಲ್ಲವೇ? ನಾನು ನಿಮ್ಮ ದೇವರಾದ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು