Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:55 - ಕನ್ನಡ ಸತ್ಯವೇದವು C.L. Bible (BSI)

55 ಏಕೆಂದರೆ ಇಸ್ರಯೇಲರು ನನ್ನ ದಾಸರೇ; ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆನಲ್ಲವೇ? ನಾನು ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯಾಕಂದರೆ ಇಸ್ರಾಯೇಲ್ಯರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಯಾಕೆಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:55
15 ತಿಳಿವುಗಳ ಹೋಲಿಕೆ  

ಅಂಥವರು ನನಗೇ ದಾಸರು. ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆ. ಗುಲಾಮರನ್ನು ಮಾರುವಂತೆ ನೀವು ಅವರನ್ನು ವಿಕ್ರಯಿಸಬಾರದು.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.


ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು