Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:10 - ಕನ್ನಡ ಸತ್ಯವೇದವು C.L. Bible (BSI)

10 ನೀವು ಬಹು ದಿನದಿಂದ ಕೂಡಿಸಿಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ. ಹೊಸ ದವಸಧಾನ್ಯಗಳಿಗೆ ಕಣಜ ಸಾಲದೆ ಹಳೆಯದನ್ನು ತೆಗೆದುಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಬಹುದಿವಸದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:10
5 ತಿಳಿವುಗಳ ಹೋಲಿಕೆ  

ಎಂಟನೆಯ ವರ್ಷದಲ್ಲಿ ಬಿತ್ತನೆ ಮಾಡಿ ಅದರ ಬೆಳೆ ದೊರೆಯುವ ತನಕ, ಅಂದರೆ ಒಂಬತ್ತನೆಯ ವರ್ಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನ ಮಾಡುವಿರಿ.


ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.


ಮಾರನೆಯ ದಿನದಿಂದ ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು - ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು .


ಕಣಗಳಲ್ಲಿ ಗೋದಿ ರಾಶಿರಾಶಿಯಾಗಿರುವುದು. ತೊಟ್ಟಿಗಳಲ್ಲಿ ದ್ರಾಕ್ಷಾರಸ, ತೈಲಗಳು ತುಂಬಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು