Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:15 - ಕನ್ನಡ ಸತ್ಯವೇದವು C.L. Bible (BSI)

15 ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:15
27 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ಸರ್ವೇಶ್ವರನ ಮಾತನ್ನು ತಾತ್ಸಾರ ಮಾಡಿ, ಅವರ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಅಂಥವನಿಗೆ ಬಹಿಷ್ಕಾರ ಹಾಕಲೇಬೇಕು. ಅವನು ತನ್ನ ಪಾಪದ ದುಷ್ಪಲವನ್ನು ಅನುಭವಿಸುವಂತಾಗಬೇಕು.


ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!


ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.


ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು